ಮುಂಬೈ: ಬಾಲಿವುಡ್ ಸ್ಟಾರ್ ದಂಪತಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಮಾಡಿಸಿ ಸಂತಾನ ಪ್ರಾಪ್ತಿಗಾಗಿ ಸಲ್ಲಿಸಿದ್ದ ಹರಕೆ ಫಲಿಸಿದೆ. ಕತ್ರಿನಾ ಕೈಫ್ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು 2021 ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗಷ್ಟೆ ಕತ್ರಿನಾ ಕೈಫ್, ತಾವು ಗರ್ಭಿಣಿ ಆಗಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಜೋಡಿಗೆ ಮುದ್ದಾದ ಗಂಡು ಮಗು ಜನಿಸಿದೆ.
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಮದುವೆಯಾದ ಕೆಲ ವರ್ಷ ಮಕ್ಕಳಾಗಿರಲಿಲ್ಲ. ಹೀಗಾಗಿ ಕತ್ರಿನಾ ಕೈಫ್ ತಿಂಗಳುಗಳ ಹಿಂದೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಮಾಡಿಸಿದ್ದರು. ಸಂತಾನ ಪ್ರಾಪ್ತಿಗಾಗಿ ಬೇಡಿಕೊಂಡಿದ್ದರು. ಅದಾದ ಕೆಲವೇ ತಿಂಗಳಲ್ಲಿ ಕತ್ರಿನಾ ಕೈಫ್ ಅವರು ತಾವು ಗರ್ಭಿಣಿ ಆಗಿರುವ ಸಂಗತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು. ಇದೀಗ ಈ ದಂಪತಿಗೆ ಗಂಡು ಮಗು ಜನಿಸಿದೆ.
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರುಗಳು ಕೆಲ ಸಮಯ ಪ್ರೀತಿಸಿ 2021 ರಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು.
