ಬೆಂಗಳೂರು: ಬಾಗಲೂರಿನ ಅಪಾರ್ಟ್ಮೆಂಟ್‌ವೊಂದರ ಮನೆಕೆಲಸದಾಕೆ ಲಿಫ್ಟ್‌ನಲ್ಲಿ ನಾಯಿಮರಿ ಕೊಂದಿದ್ದ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿದ್ದು, ಆಕೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ 50 ಗ್ರಾಂ ಚಿನ್ನ ಹಾಗೂ ವಜ್ರದ ಉಂಗುರವೊಂದನ್ನು ಕಳ್ಳತನ ಮಾಡಿರುವುದು ತನೆಖೆ ವೇಳೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬಾಗಲೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಲಿಫ್ಟ್‌ನಲ್ಲಿ ನಾಯಿಮರಿಯನ್ನು ಹಿಡಿದು ನೆಲಕ್ಕೆ ಬಡಿದು ಉಸಿರುಗಟ್ಟಿಸಿ ಅಮಾನವೀಯವಾಗಿ ಕೊಲೆ ಮಾಡಿದ ಆರೋಪಿ ಪುಷ್ಪಲತಾ ವಿರುದ್ಧ ಮನೆ ಮಾಲೀಕರಾದ ರಾಶಿಕಾ ಚಿನ್ನ ಕಳ್ಳತನ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ನ.2ರಂದು ಮನೆಯ ವಾರ್ಡ್ರೋಬ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಕಾಣೆಯಾಗಿತ್ತು. ಸುಮಾರು 50 ಗ್ರಾಂ ಮೌಲ್ಯದ ಚಿನ್ನದ ಸರ, ಒಂದು ಉಂಗುರ ಹಾಗೂ ಒಂದು ವಜ್ರದ ಉಂಗುರ ಕಳುವಾಗಿತ್ತು ಎಂದು ರಾಶಿಕಾ ದೂರಿನಲ್ಲಿ ತಿಳಿಸಲಾಗಿದೆ. ಮನೆಕೆಲಸದಾಕೆ ಪುಷ್ಪಲತಾ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರು ವಿಚಾರಣೆ ನಡೆಸಿದಾಗ, ಆಕೆ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.