ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥರಾದ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಭಾನುವಾರ ನಡೆದ ಚುನಾವಣೆ ನಡೆಸಲಾಯಿತು. ಪುಷ್ಪರಾಜ್ 187 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.
ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಗಳಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲೈಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಗೆ ಹರೀಶ್ ಕೆ.ಆದೂರ್, ಗಿರೀಶ್ ಅಡ್ಡಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಒಟ್ಟು 21 ಮಂದಿ ಸ್ಪರ್ಧಿಸಿದ್ದರು.
ಅಧ್ಯಕ್ಷರಾಗಿ ಸೇರಿದಂತೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿದ್ದ ಖಾದರ್ ಷಾ ಪ್ರಮಾಣ ಪತ್ರವನ್ನು ವಿತರಿಸಿ, ಅಭಿನಂದನೆ ಸಲ್ಲಿಸಿದರು.