ಶೀಘ್ರದಲ್ಲೇ ಮುಳಿಹಿತ್ಲು ರಸ್ತೆ ಅಗಲೀಕರಣ : ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನ ಮುಳಿಹಿತ್ಲು ಪ್ರದೇಶದಲ್ಲಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಅವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಮುಳಿಹಿತ್ಲು ಪ್ರದೇಶದ ರಸ್ತೆ ಅಗಲೀಕರಣದ ಅವಶ್ಯಕತೆಯನ್ನು ಸ್ಥಳೀಯ ಸದಸ್ಯರು ಮತ್ತು ಸಾರ್ವಜನಿಕರು ಹಲವಾರು ಬಾರಿ ಮುಂದಿಟ್ಟಿದ್ದರು. ಅದರಂತೆ, ಪಾಲಿಕೆಯ ಪ್ರೀಮಿಯಂ ಎಫ್.ಎ.ಆರ್ ಅನುದಾನವನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಭಾನುಮತಿ ಪಿ.ಎಸ್., ಮಾಜಿ ಸದಸ್ಯೆ ರೇವತಿ ಶೆಟ್ಟಿ, ಬಿಜೆಪಿ ನಾಯಕರಾದ ದೀಪಕ್ ಪೈ, ಅಮಿತ್ ಶೆಟ್ಟಿ, ಪ್ರಸಾದ್ ಬೋಳಾರ, ಉಮಾನಾಥ ಕೋಟೆಕಾರ್, ಗಿರೀಶ್ ಶೆಟ್ಟಿ, ದಿನೇಶ್ ಶೆಟ್ಟಿ, ಕೇಶವ ಶೆಟ್ಟಿ, ಸುಜಾತ ಆಳ್ವ, ಜಯಶ್ರೀ, ಶಬರಿ ಶೆಟ್ಟಿ, ಜಯಶ್ರೀ ಕೊಟ್ಟಾರಿ, ಗಾಯತ್ರಿ, ವಿವೇಕ್ ಶೆಟ್ಟಿ ಸೇರಿದಂತೆ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com
error: Content is protected !!