ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಚರಂಡಿಯಲ್ಲಿ ಮೃತದೇಹ ಪತ್ತೆ

ಬಂಟ್ವಾಳ: ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಚರಂಡಿಯೊಂದರಲ್ಲಿ ಸೋಮವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55) ಮೃತ ವ್ಯಕ್ತಿ.

ಅಡಿಕೆ ಸಂಸ್ಕರಣಾ ಘಟಕವೊಂದರಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ ಅವರು ಭಾನುವಾರ ರಾತ್ರಿ 9:30 ರ ನಂತರ ಕಾಣೆಯಾಗಿದ್ದರು. ಸೋಮವಾರ ಬೆಳಿಗ್ಗೆ, ಪಾದಚಾರಿಗಳು ಚರಂಡಿಯಲ್ಲಿ ಅವರ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಮೃತ ವ್ಯಕ್ತಿ ಮದ್ಯಪಾನ ವ್ಯಸನಿಯಾಗಿದ್ದು, ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದ ತಕ್ಷಣ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಠಾಣಾಧಿಕಾರಿ ರಾಮಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!