BREAKING NEWS… ಭೀಕರ ಸ್ಫೋಟಕ್ಕೆ ನಲುಗಿದ ದೆಹಲಿ! ಛಿದ್ರಗೊಂಡ ದೇಹಗಳು, 9ಕ್ಕೂ ಹೆಚ್ಚು ಬಲಿ!


ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ ಸಂಭವಿಸಿ 9ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡ ಆಘಾತಕಾರಿ ಘಟನೆ ಸಂಭವಿಸಿದೆ.


ಕೆಂಪು ಕೋಟೆ ಚಾಂದಿನಿ ಚೌಕ್ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ. ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಭಯೋತ್ಪಾದಕರ ಅತೀ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ ಬೆನ್ನಲ್ಲೇ ಈ ಸ್ಫೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಫೋಟದ ಕಾರಣ ಸ್ಪಷ್ಟವಾಗಿಲ್ಲ. ಆದರೆ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಾರಿನಲ್ಲಿ ಸ್ಫೋಟಕವಿಟ್ಟು ಬ್ಲಾಸ್ಟ್ ಮಾಡಿರುವ ಅನುಮಾನಗಳು ವ್ಯಕ್ತವಾಗುತ್ತಿದೆ. ಮೇಲ್ನೋಟಕ್ಕೆ ಭಯೋತ್ಪಾದಕರ ಕೃತ್ಯ ಎಂದು ವರದಿಗಳು ಹೇಳುತ್ತಿದೆ. ದೆಹಲಿ ಕಾರು ಸ್ಫೋಟದಲ್ಲಿ ಆರಂಭದಲ್ಲಿ ಓರ್ವ ಮೃತಪಟ್ಟಿರುವುದು ವರದಿಯಾಗಿತ್ತು. ಇದೀಗ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಪೊಲೀಸರು ಸಂಪೂರ್ಣ ಪ್ರದೇಶ ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಹಲವು ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.
ಕಾರಿನ ಸಿಎನ್‌ಜಿ ಕಿಟ್ ಸ್ಪೋಟಗೊಂಡಿರುವ ಅನುಮಾನಗಳು ವ್ಯಕ್ತವಾಗಿದೆ. ಆದರೆ ಘಟನೆಗೆ ಸ್ಪಷ್ಟ ಕಾರಣ ಲಭ್ಯವಾಗಿಲ್ಲ. ಕೇಂದ್ರ ತನಿಖಾ ಎಜೆನ್ಸಿಗಳು ಸ್ಥಳಕ್ಕೆ ಧಾವಿಸಿದೆ.


ಕಾರು ಸ್ಫೋಟಗೊಳ್ಳುತ್ತಿದ್ದಂತೆ ಕೆಂಪು ಕೋಟೆ ಮೆಟ್ರೋ ನಿಲ್ದಾಣ ಬಳಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಎರಡು ಕಾರು ಸುಟ್ಟು ಭಸ್ಮವಾಗಿದ್ದರೆ, ಹತ್ತಿರದ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿದೆ.

error: Content is protected !!