ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬಯಿ: ಬಾಲಿವುಡ್ ದಿಗ್ಗಜ ನಟ ಧರ್ಮೇಂದ್ರ (89) ಅವರು ಸೋಮವಾರ (ನ.10) ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಹಿರಿಯ ನಟ ಉಸಿರಾಟದ ಸಮಸ್ಯೆಯಿಂದಾಗಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಾಲಿವುಡ್‌ನ ಹೀ-ಮ್ಯಾನ್ ಎಂದು ಪ್ರಖ್ಯಾತರಾಗಿದ್ದ ಧರ್ಮೇಂದ್ರ ಆರು ದಶಕಗಳಿಗೂ ಹೆಚ್ಚು ಕಾಲದ ಗಮನಾರ್ಹ ಸಿನಿಮಾ ರಂಗವನ್ನು ಬಿಟ್ಟು ಹೋಗಿದ್ದಾರೆ. ಕೊನೆಯ ಚಿತ್ರವು ”ಇಕ್ಕಿಸ್‌” ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ.

ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾದ ಧರ್ಮೇಂದ್ರ 1960 ರ ಚಲನಚಿತ್ರ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಮೂಲಕ ವೃತ್ತಿಜೀವನ ಪ್ರಾರಂಭಿಸಿದ್ದರು. ಅವರಿಗೆ 2012 ರಲ್ಲಿ ಭಾರತ ಸರ್ಕಾರದಿಂದ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಆರು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ಅವರು ‘ಯಾದೋನ್ ಕಿ ಬಾರತ್’, ‘ಮೇರಾ ಗಾಂವ್ ಮೇರಾ ದೇಶ್’, ‘ನೌಕರ್ ಬಿವಿ ಕಾ’, ‘ಫೂಲ್ ಔರ್ ಪತ್ತರ್’, ‘ಬೇಗಹಬಾಯ್’ ಮತ್ತು ಇತರ ಪ್ರಶಸ್ತಿ ವಿಜೇತ ಚಲನಚಿತ್ರಗಳಲ್ಲಿ ನಟಿಸಿದ್ದರು.

ಪಂಜಾಬ್‌ನ ಲುಧಿಯಾನದ ಹಳ್ಳಿಯಲ್ಲಿ ಜನಿಸಿದ ಧರ್ಮೇಂದ್ರ ಅವರ ಮೊದಲ ಹೆಸರು ಕೇವಲ್ ಕ್ರಿಶನ್ ಡಿಯೋಲ್. 1954 ರಲ್ಲಿ 19 ನೇ ವಯಸ್ಸಿನಲ್ಲಿ ಪ್ರಕಾಶ್ ಕೌರ್ ಅವರನ್ನು ವಿವಾಹವಾಗಿದ್ದರು. ಚಿತ್ರರಂಗಕ್ಕೆ ಪ್ರವೇಶಿಸಿದ ನಂತರ, ನಟಿ ಹೇಮಾ ಮಾಲಿನಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಧರ್ಮೇಂದ್ರ 2004 ರಿಂದ 2009 ರವರೆಗೆ ರಾಜಸ್ಥಾನದ ಬಿಕಾನೇರ್ ನಿಂದ ಬಿಜೆಪಿಯ ಲೋಕಸಭಾ ಸದಸ್ಯರಾಗಿದ್ದರು.

error: Content is protected !!