ದೆಹಲಿ ಕಾರು ಸ್ಫೋಟ ಪ್ರಕರಣ : ಜೈಶ್ ಮಹಿಳಾ ವಿಂಗ್‌ನ ನಾಯಕಿ ಶಾಹಿನಾ ಬಂಧನ

ದೆಹಲಿ: ಕೆಂಪುಕೋಟೆಯ ಬಳಿಯ ಸ್ಫೋಟದ ತನಿಖೆ ನಡೆಸುತ್ತಿದ್ದು, ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ.

ಸೋಮವಾರ (ನ.10) ಜಮ್ಮು ಕಾಶ್ಮೀರ ಮತ್ತು ಫರೀದಾಬಾದ್ ಪೊಲೀಸರು ಜಂಟಿ ಕಾರ್ಯಾಚರಣೆ ವೇಳೆ 2,900 ಕೆ.ಜಿ ಸ್ಫೋಟಕಗಳನ್ನು ಪತ್ತೆ ಹಚ್ಚಿ, ಎಂಟು ಜನರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೇ ಇದೀಗ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ವೈದ್ಯೆ ಶಾಹಿನಾ ಕಾರಿನಲ್ಲಿ ರೈಫಲ್, ಮದ್ದುಗುಂಡುಗಳು ಪತ್ತೆಯಾಗಿವೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಬಂಧಿತ ವೈದ್ಯೆ ಜೈಶ್ ಮಹಿಳಾ ವಿಂಗ್‌ಗೆ ಭಾರತದ ನಾಯಕಿಯಾಗಿದ್ದು, ಜೆಇಎಂ ಸಂಸ್ಥಾಪಕ ಮಸೂದ್ ಅಜರ್‌ನ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಇಎಂನ ಮಹಿಳಾ ವಿಭಾಗವಾದ ಜಮಾತ್ ಉಲ್-ಮೊಮಿನಾತ್‌ನ ಕಮಾಂಡ್ ಜವಾಬ್ದಾರಿಯನ್ನು ಕೂಡ ಆರೋಪಿ ಶಾಹಿನಾಗೆ ವಹಿಸಲಾಗಿತ್ತು.

ಅಧಿಕಾರಿಗಳ ಮಾಹಿತಿ ಪ್ರಕಾರ, ಶಾಹಿನಾ ಶಾಹಿದ್ ಲಕ್ನೋದ ಲಾಲ್‌ಬಾಗ್ ನಿವಾಸಿಯಾಗಿದ್ದು, ಬಂಧಿತ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್ ಜೊತೆಗೆ ನಿಕಟ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ.

error: Content is protected !!