ಮಂಗಳೂರು: ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಎರಡು ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಖಚಿತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮೊಹಮ್ಮದ್ ಶಾರೂಕ್ ನನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.