ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ.

ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳ ಆಧಾರದ ಮೇಲೆ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ.

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ. 18 ವರ್ಷದಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳಾ ನೌಕರರಿಗೆ ಕಡ್ಡಾಯ ರಜೆ ನೀಡಬೇಕು. ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.

error: Content is protected !!