ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ.

ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆಂದು ಹೇಳಿದರು.
ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನುವುದು ಗೊತ್ತಿಲ್ಲ. ಇಲ್ಲೂ ಮತಗಳ್ಳತನವಾಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ ಹಿಡಿದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಿತೀಶ್ ಕುಮಾರ್ ಯಾರು? ಅವರು ಓಬಿಸಿ ಅಲ್ಲವಾ? ಸಿಡಿಮಿಡಿಗೊಂಡರು.
