ಪ್ರಿಯಾಂಕ್ ಖರ್ಗೆ ತವರಿನಲ್ಲಿ ಹಾರಿದ ಭಗವಾಧ್ವಜ: ಮೊಳಗಿದ ಸಮಸ್ತೇ ಸದಾ ವತ್ಸಲೇ..!

ಕಲಬುರಗಿ: ಒಂದು ತಿಂಗಳಿನಿಂದ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಭಗವಾಧ್ವಜ ಹಾರಿಸಿ ಆರ್‌ಎಸ್‌ಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು. ಪಥ ಸಂಚಲನದಲ್ಲಿ ಸುಮಾರು 300 ಮಂದಿ ಗಣವೇಶಧಾರಿಗಳು ಕೈಯಲ್ಲಿ ಲಾಠಿಗಳನ್ನು ಹಿಡಿದು ಶಿಸ್ತುಬದ್ಧರಾಗಿ ಪಥಸಂಚಲನ ಹೊರಟರು. ಇದರ ಜೊತೆಗೆ 50ಕ್ಕೂ ಹೆಚ್ಚು ಘೋಷವಾದಕರು ಜೈಘೋಷಗಳೊಂದಿಗೆ ಪಥಸಂಚಲನಕ್ಕೆ ಇನ್ನಷ್ಟು ಮೆರುಗು ತುಂಬಿದರು.

RSS Route March in Chittapur successful
ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ,ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಯಿತು. ಹೈಕೋರ್ಟ್‌ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿತ್ತು.

ಆರ್‌ಎಸ್‌ಎಸ್‌ 100 ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಡೆದ ಪಥಸಂಚಲನದಲ್ಲಿ ಭಾಗಿಯಾದ ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು.ರಸ್ತೆಯ ಎರಡೂ ಬದಿಯಲ್ಲಿ ನಿಂತು ಗಣವೇಷಧಾರಿಗಳ ಮೇಲೆ ಹೂವಿನ ಮಳೆ ಸುರಿಸಿದರು. ಮಧ್ಯಾಹ್ನ 3:45ಕ್ಕೆ ಆರಂಭವಾದ ಪಥ ಸಂಚಲನ 4:22ಕ್ಕೆ ಮುಕ್ತಾಯವಾಯಿತು. ಸರಿಸುಮಾರು 47 ನಿಮಿಷಗಳ ಕಾಲ ಒಟ್ಟು 1.25 ಕಿ.ಮೀ ಪಥಸಂಚಲನ ನಡೆಯಿತು.

ಮೊಳಗಿದ ಸಮಸ್ತೇ ಸದಾ ವತ್ಸಲೇ..
ಆರೆಸ್ಸೆಸ್ ಕಾರ್ಯಕರ್ತರು ಭಾಗವಾ ಧ್ವಜ ನೆಟ್ಟು, ಆರೆಸ್ಸೆಸ್ ಗೀತೆ ನಮಸ್ತೇ ಸದಾ ವತ್ಸಲೇ.. ಗೀತೆ ಹೇಳಿ ಭಾರತ್ ಮಾತಾ ಕೀ ಜೈ ಎನ್ನುತ್ತಾ ಜಯಘೋಷ ಮೊಳಗಿಸಿ ಪಥ ಸಂಚಲನ ಆರಂಬಿಸಿದರೆ ಇತ್ತ ಆರೆಸ್ಸೆಸ್ ಪಥ ಸಂಚನಲ ಶುರುವಾಗುತ್ತಿದ್ದಂತೆ ಇನ್ನೊಂದೆಡೆ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಸಾರ್ವಜನಿಕರು ಭಾರತ್ ಮಾತಾ ಕೀ ಜೈ ಎನ್ನುತ್ತಾ ಜಯಘೋಷ ಹೇಳಿ ಗಣವೇಷಧಾರಿಗಳಿಗೆ ಸಾರ್ವಜನಿಕರು ಪುಷ್ಪಾರ್ಚನೆ ಮಾಡಿದರು.. ಇಂದು ಚಿತ್ತಾಪುರದಲ್ಲಿ ನಡೆಯುತ್ತಿರುವ ಪಥಸಂಚಲನಕ್ಕೆ ಭಾರೀ ಜನ ಬೆಂಬಲ ವ್ಯಕ್ತವಾಯಿತು.

ಬಿಗಿ ಭದ್ರತೆ:
ಪಥಸಂಚಲನ ನಡೆಯುವ 1.25 ಕಿ.ಮೀ. ಸಾಗುವ ದಾರಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌, ಕೆಎಸ್‌ಆರ್‌ಪಿ ಡಿಎಆರ್ ತುಕಡಿ ಸೇರಿದಂತೆ 650ಜನ ಪೋಲಿಸರು 250ಜನ ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು.

ಪಥಸಂಚಲನ ನಡೆಯುವ ಮಾರ್ಗದಲ್ಲಿ ಪುರಸಭೆಯಿಂದ 12 ಹಾಗೂ ಪೋಲಿಸ್ ಇಲಾಖೆಯಿಂದ 44 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. 5 ಡ್ರೋಣ್ ಕ್ಯಾಮೆರಾ ಮೂಲಕ ಜನರ ಚಲನವಲನದ ಮೇಲು ಖಾಕಿ ಪಡೆ ಹದ್ದಿನ ಕಣ್ಣಿಟ್ಟಿತ್ತು. ಪಥ ಸಂಚಲನ ನಡೆಯುವ ಮಾರ್ಗದಲ್ಲಿ ಒಟ್ಟು 200 ಧ್ವಜ ಹಾಗೂ ಬಂಟಿಂಗ್, ಪ್ಲೆಕ್ಸ್, ಕಟ್ಟಲು ಪುರಸಭೆ ಅನುಮತಿ ನೀಡಿತ್ತು.

ಪಥಸಂಚಲನದಲ್ಲಿ ಭಾಗಿಯಾಗಲು ಬೇರೆ ಕಡೆಯಿಂದಲೂ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಆರ್‌ಎಸ್‌ಎಸ್‌ ಮೊದಲೇ ಪಟ್ಟಿಯಲ್ಲಿ ನೀಡಿದ್ದ ವ್ಯಕ್ತಿಗಳಿಗೆ ಮಾತ್ರ ಪೊಲೀಸರು ಅನುಮತಿ ನೀಡಿದ್ದರು. ಚಿತ್ತಾಪುರ ಹೊರತು ಪಡಿಸಿ ಬೇರೆ ಕಡೆಯಿಂದ ಆಗಮಿಸಿದ ಕಾರ್ಯಕರ್ತರಿಗೆ ಪಥಸಂಚಲನದಲ್ಲಿ ಭಾಗಿಯಾಗಲು ಅವಕಾಶ ನೀಡಿರಲಿಲ್ಲ.

error: Content is protected !!