ಶಬರಿಮಲೆ ಯಾತ್ರಿಕರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಭೀತಿ: ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದ್ದು ಯಾತ್ರೆಯ ಆರಂಭದ ಮಧ್ಯೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ನದಿಯಲ್ಲಿ ತೀರ್ಥಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸಲು, ಕುಡಿಯಲು ಬಿಸಿ ನೀರನ್ನು ಬಳಸಲು, ಆಗಾಗ ಕೈಗಳನ್ನು ನೀರಿನಿಂದ ತೊಳೆದುಕೊಳ್ಳುವಂತೆ ಮತ್ತು ತೊಳೆದ ಹಣ್ಣುಗಳನ್ನು ಸೇವಿಸಲು ಸೂಚಿಸಲಾಗಿದೆ. ಅಲ್ಲದೆ, ಬೆಟ್ಟ ಹತ್ತುವಾಗ ಆಗಾಗ ವಿಶ್ರಾಂತಿ ಪಡೆಯುವಂತೆ ಮತ್ತು ಶೌಚಾಲಯಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ.

ಇದರ ಜೊತೆಗೆ, ದೇಗುಲದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಶಬರಿಮಲೆಗೆ ಭೇಟಿ ನೀಡಿದೆ. ಕೋರ್ಟ್ ಸೂಚನೆಯಂತೆ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಫಲಕಗಳ ವೈಜ್ಞಾನಿಕ ಪರೀಕ್ಷೆ ನಡೆಯಲಿದೆ. ಶುದ್ಧತೆ, ಗುಣಮಟ್ಟ ಹಾಗೂ ತೂಕದ ಪರಿಶೀಲನೆ ನಡೆಸಲಾಗುತ್ತದೆ. ಫಲಕಗಳ ಮೇಲ್ಮೈ ವಿಸ್ತೀರ್ಣವನ್ನು ಅಳೆಯುವ ಜೊತೆಗೆ, ದ್ವಾರಪಾಲಕ ಮೂರ್ತಿಗಳ ಕವಚಗಳು ಮತ್ತು ಬಾಗಿಲಿನ ಚೌಕಟ್ಟುಗಳ ತಾಮ್ರದ ಮಾದರಿಗಳನ್ನು ಸಹ ಸಂಗ್ರಹಿಸಲಾಗುತ್ತದೆ.

error: Content is protected !!