ಮಂಗಳೂರು: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ

ಮನೆಯ ಹೊರಗೆ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಸಂತ್ರಸ್ತೆ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.