ಮೂಡಬಿದ್ರೆಯಲ್ಲಿ ಅಕ್ರಮ ಜಾನುವಾರು ಸಾಗಾಟ- ಮೂವರು ವಶ; ಮನ್ಸೂರ್ ಅದ್ಯಪಾಡಿಗೆ ಇದು 30ನೇ ಪ್ರಕರಣ

ಮೂಡಬಿದ್ರೆ: ಮೂಡಬಿದ್ರೆ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ನಡೆಸಿದ ದಾಳಿಯಲ್ಲಿ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಅಕ್ಟೋಬರ್ 15ರಂದು ಸಂಜೆ 5 ಗಂಟೆಗೆ ಬೆಳಕಿಗೆ ಬಂದಿದೆ.

ಹೊಸ್ಮಾರು–ನೆಲ್ಲಿಕಾರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್ ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂದು ಗುರುತಿಸಲಾಗಿದೆ. ಅವರೊಂದಿಗೆ ಇನ್ನೂ ಕೆಲವರು ಇದ್ದರು ಎನ್ನಲಾಗಿದೆ.

ಘಟನೆಯ ಸಂಬಂಧ ಮೂಡಬಿದ್ರೆ ಠಾಣೆಯಲ್ಲಿ ಅಪರಾಧ ಸಂಖ್ಯೆ 178/2025, ಕಲಂ 111 BNS, ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 11(1)(ಡಿ) ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಆಧ್ಯಾದೇಶ ಕಾಯ್ದೆ ಕಲಂ 4, 5, 7, 12 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ವರದಿ ಪ್ರಕಾರ, ಮನ್ಸೂರ್ ಅದ್ಯಪಾಡಿ ವಿರುದ್ಧ ಈಗಾಗಲೇ 29 ಪ್ರಕರಣಗಳು ನೋಂದಾಯವಾಗಿದ್ದು, ಇದು 30ನೇ ಪ್ರಕರಣವಾಗಿದೆ. ಮೊಹಮ್ಮದ್ ಅಶ್ವದ್ ವಿರುದ್ಧ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ 1 ಪ್ರಕರಣ ಇರುವುದರಿಂದ, ಇದು 2ನೇ ಪ್ರಕರಣವಾಗಿದೆ. ಹಾಗೂ ಅಬ್ದುಲ್ ಮೊಹಮ್ಮದ್ ನಿಶಾಮ್ ವಿರುದ್ಧ ಇದು ಮೊದಲ ಪ್ರಕರಣವಾಗಿದೆ.

ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ಅಡಿ ಪ್ರಕರಣ ದಾಖಲಿಸಲಾಗಿ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಮಾನ್ಯ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

error: Content is protected !!