ದೆಹಲಿ ಸ್ಫೋಟ ಪ್ರಕರಣ : 25 ಸ್ಥಳಕ್ಕೆ ಇಡಿ ದಾಳಿ

ನವದೆಹಲಿ: ಕೆಂಪು ಕೋಟೆ ಸ್ಫೋಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹರಿಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ.

“ವೈಟ್ ಕಾಲರ್” ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ.

ಬೆಳಿಗ್ಗೆ 5 ಗಂಟೆ ಅಧಿಕಾರಿಗಳು ದೆಹಲಿಯಲ್ಲಿರುವ ವಿಶ್ವವಿದ್ಯಾಲಯದ ಪ್ರಧಾನ ಕಚೇರಿ ಮತ್ತು ಸಂಸ್ಥೆಯ ಟ್ರಸ್ಟಿಗಳ ಮೇಲೆ ದಾಳಿ ನಡೆಸಲಾಗಿದೆ. ವಿಶ್ವವಿದ್ಯಾಲಯದ ಅಧ್ಯಕ್ಷ ಜಾವೇದ್ ಅಹ್ಮದ್ ಸಿದ್ದಿಕಿ ಅವರನ್ನು ಅವರ ನಿವಾಸದ ಮೇಲೂ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಭಯೋತ್ಪಾದಕ ಘಟಕಗಳೊಂದಿಗೆ ಸಂಪರ್ಕ ಹೊಂದಿರುವ ವಿಚಾರ ಬೆಳಕಿಗೆ ಬಂದ ನಂತರ ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಅಲ್-ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವವನ್ನು ಈಗಾಗಲೇ ರದ್ದುಗೊಳಿಸಿದೆ. ವಿಶ್ವವಿದ್ಯಾಲಯದ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಹಾಗೂ ನಕಲಿ ದಾಖಲೆಗಳಿಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ ಕೆಲ ದಿನಗಳ ನಂತರ ಇಡಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

error: Content is protected !!