ಟ್ಯಾಂಕರ್‌ ಪಲ್ಟಿ: ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!

ಕಾರವಾರ: ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಅಂಕೋಲಾದ ಕಂಚಿನ ಬಾಗಿಲು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಟ್ಯಾಂಕರ್‌ನಲ್ಲಿದ್ದ ಮಿಥೆನ್ ಸೋರಿಕೆಯಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಇಂದು(ನ.18) ಸಂಭವಿಸಿದೆ.

ಟ್ಯಾಂಕರ್ ಗುಜರಾತ್ ನಿಂದ ಹುಬ್ಬಳ್ಳಿ-ಯಲ್ಲಾಪುರ ಮೂಲಕ ಉಡುಪಿಗೆ ಸಾಗುತ್ತಿತ್ತು ಎನ್ನಲಾಗಿದೆ. ಇದರ ಪರಿಣಾಮವಾಗಿ ಮಹಾರಾಷ್ಟ್ರ ಮೂಲದ ಚಾಲಕ ಅರುಣ್ ಶೇಖ್ (57) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ಯಾಂಕರ್‌ನಿಂದ ಮಿಥೆನ್‌ ಸೊರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಘಟನೆ ಸಂಭವಿಸಿದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಿಬ್ಬಂಧಿಗಳು ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಹಾಗೂ ವಾಹನಗಳ ಓಡಾಟ, ವಾಹನಗಳ ನಿಲುಗಡೆ ನಿರ್ಬಂಧಿಸಿ ಎಂದು ಆದೇಶಿಸಿದ್ದಾರೆ.

ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

error: Content is protected !!