
ಬಂಟ್ವಾಳ: ಬಿಸಿ ರೋಡ್ ಜಂಕ್ಷನ್ ನಲ್ಲಿರುವ ಸೋಮಯಾಜಿ ಟೆಕ್ಸ್ ಟೈಲ್ ಮಾಲಕನ ಮೇಲೆ ಬುರ್ಖಾ ಧರಿಸಿಕೊಂಡು ಬಂದಿದ್ದ ಅವರ ಪತ್ನಿಯೇ ಕತ್ತಿಯಿಂದ ಕಡಿದು ಪರಾರಿಯಾಗಿದ್ದು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದ ಘಟನೆ ಇಂದು ಸಂಜೆ 7:39ರ ಸುಮಾರಿಗೆ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ.
ಬುರ್ಖಾ ಧರಿಸಿ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಅವರು ಕ್ಯಾಸ್ ಕೌಂಟರ್ ನಲ್ಲಿ ಕುಳಿತ್ತಿದ್ದ ಗಂಡನಿಗೆ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು.
ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳ ನಗರ ಪೋಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.