ದುಬೈ ಏರೋ ಶೋನಲ್ಲಿ ದುರಂತ: ಆಗಸದಿಂದ ಪತನಗೊಂಡು ಬೆಂಕಿಯುಂಡೆಯಾದ ತೇಜಸ್

ದುಬೈ: ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ.

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಬೆಂಕಿಯುಂಡೆಯಾಗಿ ಸ್ಫೋಟ, Video

ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.

ಪೈಲಟ್‌ನ ಸ್ಥಿತಿ ಅಥವಾ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ಅಧಿಕಾರಿಗಳು ತಕ್ಷಣಕ್ಕೆ ದೃಢಿಕರಿಸಿಲ್ಲ. ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ. ಎಮಿರೇಟ್ಸ್ ಮತ್ತು ಪ್ಲೈ ದುಬೈನಿಂದ ಬಹು ಬಿಲಿಯನ್ ಡಾಲರ್ ಮೊತ್ತದ ವಿಮಾನ ಖರೀದಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಏರ್ ಶೋ ವೇಳೆಯಲ್ಲಿ ಘೋಷಿಸಲಾಗಿದೆ. ಇದು ಎರಡನೇ ತೇಜಸ್ ವಿಮಾನದ ಅಪಘಾತವಾಗಿದೆ. ಮಾರ್ಚ್ 2024ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತೇಜಸ್ ಯುದ್ಧವಿಮಾನವು ಪತನಗೊಂಡಿತ್ತು.ಆದರೆ ಪೈಲಟ್ ಸುರಕ್ಷಿತವಾಗಿ ಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ತೇಜಸ್ 4.5 ಪೀಳಿಗೆಯ ಬಹುಪಯೋಗಿ ಯುದ್ಧ ವಿಮಾನವಾಗಿದ್ದು, ವಾಯು-ರಕ್ಷಣಾ ಕಾರ್ಯಾಚರಣೆ, ಆಕ್ರಮಣಕಾರಿ ವಾಯು ಬೆಂಬಲ ಮತ್ತು ಯುದ್ಧ ಕಾರ್ಯಾಚರಣೆಗಳನ್ನು ನಿರ್ವಹಿಸಲು ನಿರ್ಮಿಸಲಾಗಿದೆ. ಇದು ಹಗುರವಾದ ಮತ್ತು ಚಿಕ್ಕ ಯುದ್ಧವಿಮಾನಗಳಲ್ಲಿ ಒಂದಾಗಿದೆ.

error: Content is protected !!