ಭಾರತ ಟೆಸ್ಟ್ ತಂಡದ ಭಾರತ ಟೆಸ್ಟ್ ತಂಡದ ನಾಯಕನಾಗಿ ರಿಷಭ್ ಪಂತ್ ಪಾದಾರ್ಪಣೆ

ಬೆಂಗಳೂರು: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ರಿಷಭ್ ಪಂತ್ ಟೆಸ್ಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್​​ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಶುಭ್​​ಮನ್ ಗಿಲ್ ಅನುಪಸ್ಥಿತಿಯಲ್ಲಿ ಇದೀಗ ದ್ವಿತೀಯ ಟೆಸ್ಟ್​ನಲ್ಲಿ ರಿಷಭ್ ಪಂತ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತ ಟೆಸ್ಟ್​ ತಂಡವನ್ನು 38ನೇ ನಾಯಕನಾಗಿ ಪಂತ್ ಮುನ್ನಡೆಸಲಿದ್ದಾರೆ.

error: Content is protected !!