ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (PMO) ಅಧಿಕೃತವಾಗಿ ದೃಢಪಡಿಸಿದೆ.

ಉಡುಪಿಯಲ್ಲಿ ಮೊದಲಿನಿಂದಲೇ ಯೋಜಿಸಲಾಗಿದ್ದ ರೋಡ್ ಶೋ ರದ್ದುಗೊಂಡಿದ್ದು, ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ನೇರವಾಗಿ ಶ್ರೀಕೃಷ್ಣ ಮಠ ಪ್ರವೇಶಿಸಲಿದ್ದಾರೆ. ಬಳಿಕ ಸುವರ್ಣತೀರ್ಥ ಮಂಟಪ ಹಾಗೂ ಕನಕನ ಕಿಂಡಿಯ ಸ್ವರ್ಣ ಕವಚದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ಮೋದಿ ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತಾ ಪಾರಾಯಣ ಗಾಯಕರು ನೀಡುವ ವಂದನೆ ಸ್ವೀಕರಿಸಿ, ಗೀತಗಾಯನ ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
