ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಕಾರು ಅಪಘಾತಕ್ಕೆ ಬಲಿ

ಕಲಬುರಗಿ: ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಸಮೀಪ ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ‌ ಇಂದು(ನ.26) ನಡೆದಿದೆ.

ಮಹಾಂತೇಶ ಬೀಳಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರ ಸಂಬಂಧಿಗಳಾದ ಶಂಕರ್ ಬೀಳಗಿ ಮತ್ತು ಈರಣ್ಣ ಬೀಳಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ರಾಜು ಹಾಗೂ ಈರಣ್ಣ ಶಿರಸಂಗಿ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ನಾಯಿಯೊಂದು ರಸ್ತೆಗೆ ಅಡ್ಡಬಂದಿದ್ದನ್ನು ತಪ್ಪಿಸಲು ಯತ್ನಿಸಿದಾಗ ಈ ಅವಘಡ ಸಂಭವಿಸಿದ್ದು, ಮಹಾಂತೇಶ ಬೀಳಗಿ ಇನ್ನೋವಾ ಕಾರಿನಲ್ಲಿ ಅವರ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ.

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು.

error: Content is protected !!