ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ !

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಇಂದು(ನ.26) ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.

ಮೃತ ಮಹಿಳೆ ಸುಮಾರು (60) ವರ್ಷ ವಯಸ್ಸಿನವರಾಗಿದ್ದು, ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.

ಅಪರಿಚಿತ ಮಹಿಳೆಯ ಮೃತದೇಹದ ಪತ್ತೆಗಾಗಿ ಬಂಟ್ವಾಳ ಪೋಲೀಸರು ತಿಳಿಸಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

error: Content is protected !!