ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಕೇಳಿ ಬಂದ ಪೋಕ್ಸೋ ಪ್ರಕರಣದ ಅಂತಿಮ ತೀರ್ಪು ಇಂದು ಹೊರಬಿದ್ದಿದೆ. ಮುರುಘಾ ಶ್ರೀ ವಿರುದ್ಧದ ಕೇಸ್ ಖುಲಾಸೆಗೊಂಡಿದ್ದು, ಶಿವಮೂರ್ತಿ ಮುರುಘಾ ಶರಣರು ನಿದೋರ್ಷಿ ಎಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಈಗಾಗಲೇ ದಾವಣಗೆರೆ ವಿರಕ್ತ ಮಠದಿಂದ ಶ್ರೀಗಳು ನೇರವಾಗಿ ಕೋರ್ಟ್ ಗೆ ಆಗಮಿಸಿದ್ದರು. ಈ ಪ್ರಕರಣದಲ್ಲಿ A-1 ಮುರುಘಾ ಶ್ರೀ, A-2 ವಾರ್ಡನ್ ರಶ್ಮಿ, A-3 ಪರಮಶಿವಯ್ಯ ಆರೋಪಿಗಳಾಗಿದ್ದಾರೆ. ಮೊದಲ ಕೇಸ್ ನಲ್ಲಿ ಎರಡು ಪ್ರತ್ಯೇಕ ಜಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿ
ತ್ತು. ಈ ಪ್ರಕರಣದಲ್ಲಿ ಮುರುಘಾಶ್ರೀ ಮೊದಲ ಆರೋಪಿಯಾಗಿದ್ದರು.
2022ರಲ್ಲಿ ಎ1 ಮುರುಘಾಶ್ರೀಗಳನ್ನು ಪೊಲೀಸರು ಬಂಧಿಸಿದ್ರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿ ಮತ್ತೊಂದು ದೂರು ನೀಡಿದ್ರು. ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಮುರುಘಾ ಶ್ರೀ ಲೈಂಗಿಕ ಕಿರುಕುಳವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು.