ಬೈಕ್ ಟಯರ್ ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

ಮಂಗಳೂರು: ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ಮಹಿಳೆಯ ಸೀರೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸಂಭವಿಸಿದೆ.

ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸೀರೆ ಬೈಕ್ ಟಯರ್ ಗೆ ಸಿಲುಕಿ ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕನ ಸಮಯಪ್ರಜ್ಞೆಯಿಂದಾಗಿ ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಚಾಲಕ ಮೊಯ್ದಿ ಅವರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

error: Content is protected !!