ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಹನುಮಾನ್ ಮಂದಿರದ ಬಳಿ ಅಖಿಲೇಶ್ ಎಂಬವರ ಮೇಲೆ ನಡೆದ ತಲ್ವಾರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಬಂದರ್ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಬಂಧಿತ ಆರೋಪಿಗಳು. ಸಿನಾನ್ ನನ್ನು ಸಾರ್ವಜನಿಕರು ಘಟನಾ ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS!! ಎಡಪದವು: ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ!