ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಸಭೆ; ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಮರು ಆಯ್ಕೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ(ನ.25) ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಮೂರು ವರ್ಷಗಳ ಕಾಲಾವಧಿಗೆ ಪದಾಧಿಕಾರಿಗಳಾಗಿ ಆಯ್ಕೆಗೊಂಡವರ ಹೆಸರುಗಳನ್ನು ಚುನಾವಣೆ ಅಧಿಕಾರಿ ಪೃಥ್ವಿರಾಜ್ ರೈ ಸಭೆಗೆ ತಿಳಿಸಿದರು.

ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆಗೊಂಡರೆ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ಳೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈಯವರು ಆಯ್ಕೆಗೊಂಡರು.

ಐಕಳ ಹರೀಶ್ ಶೆಟ್ಟಿ ಅವರನು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮಂತ್ರಾಕ್ಷತೆ ನೀಡಿ ಗೌರವಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ ಅವರು ಶಾಲು ಹೊದಿಸಿದರು. ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ಪೇಟಾ ತೊಡಿಸಿ ಅಭಿನಂದಿಸಿದರು. ಮತ್ತೆಲ್ಲಾ ಪದಾಧಿಕಾರಿಗಳನ್ನು ಸ್ವಾಮೀಜಿಯವರು ಮಂತ್ರಾಕ್ಷತೆ ನೀಡಿ, ಶಾಲುಹೊದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ದುಬಾಯಿ ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪೃಥ್ವಿ ರಾಜ್ ರೈ, ಎಸಿ ಭಂಡಾರಿ, ಸುಧಾಕರ್ ಎಸ್ ಪೂಂಜ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!