ಬಸ್ ಚಾಲಕನ ಅತಿವೇಗಕ್ಕೆ ಸಾರ್ವಜನಿಕರ ತಡೆ! ಖಾಸಗಿ ಬಸ್ಸನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಲಾಲ್‌ಬಾಗ್‌ನಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಬಸ್‌ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯ ಆರೋಪ ಹಿನ್ನಲೆ ಬುಧವಾರ(ನ.26) ಸಾರ್ವಜನಿಕರು ತಡೆದ ಘಟನೆ ನಡೆದಿದೆ.

ಜಂಕ್ಷನ್‌ನಲ್ಲಿ ಕಾಯುತ್ತಿದ್ದ ಬೈಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಕೂಡಲೇ ಪ್ರತಿಕ್ರಿಯಿಸಿದ ಸಾರ್ವಜನಿಕರು ವಾಹನವನ್ನು ತಡೆದು ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಸ್ಸನ್ನು ವಶಪಡಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

error: Content is protected !!