ಮಂಜುನಾಥ ಭಂಡಾರಿ ನೇತೃತ್ವದಲ್ಲಿ ನಡೆಯಿತು ಹಕ್ಕುಬಾಧ್ಯತಾ ಸಮಿತಿಯ ಪ್ರಥಮ ಸಭೆ

ಬೆಂಗಳೂರು: ಹಕ್ಕು ಬಾಧ್ಯತಾ ಸಮಿತಿಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ವಿಧಾನ ಪರಿಷತ್‌ ಶಾಸಕ ಮಂಜುನಾಥ ಭಂಡಾರಿ ಅವರು ಇಂದು ವಿಧಾನಸೌಧದ ಶಾಸಕರ ಭವನದಲ್ಲಿ ಸಮಿತಿಯ ಪ್ರಥಮ ಸಭೆಯನ್ನು ನಡೆಸಿದರು.

ಸಭೆಯಲ್ಲಿ ವಿಧಾನ ಪರಿಷತ್ತಿನ ಹಕ್ಕುಬಾಧ್ಯತಾ ಸಮಿತಿಯ ಸದಸ್ಯರಾದ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ ಬಸವರಾಜ್ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿ ಗೌಡ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!