ಇಂದು ಉಡುಪಿಗೆ ಪ್ರಧಾನಿ ಭೇಟಿ: ಕೃಷ್ಣಮಠದ ಸುವರ್ಣ ಕನಕನ ಕಿಂಡಿ ಉದ್ಘಾಟನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು(ನ.28) ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬರಲಿದ್ದು, ಅಲ್ಲಿಂದ ಸೇನಾ ಹೆಲಿಕಾಪ್ಟರ್‌ನಲ್ಲಿ ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. 1 ಕಿ.ಮೀ. ಭರ್ಜರಿ ರೋಡ್ ಶೋ ಮೂಲಕ ರಥಬೀದಿಗೆ ಆಗಮಿಸಲಿದ್ದು, ಬಳಿಕ ಕೃಷ್ಣಮಠದಲ್ಲಿ ಸುವರ್ಣ ಕನಕನ ಕಿಂಡಿ ಉದ್ಘಾಟಿಸಿ, ಕೃಷ್ಣನ ದರ್ಶನ ಪಡೆಯಲಿದ್ದಾರೆ.

ತದನಂತರ ಪುತ್ತಿಗೆ ಮಠದಲ್ಲಿ ಸುವರ್ಣ ತೀರ್ಥ ಮಂಟಪ ಕೃಷ್ಣಾರ್ಪಣೆಗೊಳಿಸಿ, ಪರ್ಯಾಯ ಮದುಪೇಂದ್ರ ತೀರ್ಥ ಸಂಸ್ಥಾನ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಆಯೋಜಿಸಿರುವ ʼಲಕ್ಷ ಕಂಠ ಗೀತಾ ಪಾರಾಯಣʼ ದಲ್ಲಿ ಪಾಲ್ಗೊಂಡು ಭಗವದ್ಗೀತೆಯ 10 ಶ್ಲೋಕಗಳನ್ನು ಸ್ವತಃ ಪಠಣ ಮಾಡಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಇಡೀ ಉಡುಪಿ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

error: Content is protected !!