ಉಡುಪಿಗೆ ಬಂದಿಳಿದ ಮೋದಿ- ಭರ್ಜರಿ ರೋಡ್‌ ಶೋ!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜಗದ್ದೋದ್ಧಾರ ಶ್ರೀಕೃಷ್ಣನ ಉಡುಪಿ ಬಂದಿಳಿದಿದ್ದು, ಉಡುಪಿ ತುಳುವರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಿ, ಬನ್ನಂಜೆ ನಾರಾಯಣ ಗುರು ವೃತ್ತದಿಂದ ಕಲ್ಸಂಕದವರಗೆ ಮೋದಿ ರೋಡ್ ಶೋ ಆರಂಭಿಸಿದ್ದಾರೆ.

ಬನ್ನಂಜೆ ನಾರಾಯಣ ಗುರು ವೃತ್ತದಿಂದ ಕಲ್ಸಂಕದ ವರಗೆ 2 ಕಿಲೋ ಮೀಟರ್ ಪ್ರಧಾನಿ ರೋಡ್​ ಶೋ ಸಾಗುತ್ತಿದ್ದು, ಮೋದಿ ಸ್ವಾಗತಕ್ಕೆ ಜನ ಸಾಗರವೇ ಹರಿದು ಬಂದಿದೆ. ರಸ್ತೆಯುದ್ದಕ್ಕೂ ಜನರು ಸಾಲುಗಟ್ಟಿ ನಿಂತಿದ್ದು, ಪುಷ್ಪವೃಷ್ಠಿ ಸುರಿಸುತ್ತಿದ್ದಾರೆ.

PM Modi | ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ರೋಡ್ ಶೋ ಆರಂಭ

‘ಗೀತಾ ಪಾರಾಯಣʼದಲ್ಲಿ ಭಾಗಿ
ಪ್ರಧಾನಮಂತ್ರಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು ಅಲ್ಲಿ ವಿದ್ಯಾರ್ಥಿಗಳು, ಸಾಧು-ಸಂತರು, ವಿದ್ವಾಂಸರು ಮತ್ತು ವಿವಿಧ ವರ್ಗಗಳ ನಾಗರಿಕರು ಸೇರಿದಂತೆ 100,000 ಮಂದಿ ಭಾಗವಹಿಸುವ ʻಲಕ್ಷ ಕಂಠ ಗೀತಾ ಪಾರಾಯಣʼ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಾರಾಯಣಕ್ಕೆ ಪ್ರಧಾನಮಂತ್ರಿ ಸಾಕ್ಷಿಯಾಗಲಿದ್ದಾರೆ.

ʻಕನಕನ ಕಿಂಡಿʼಗೆ ಕನಕ ಕವಚ ಅರ್ಪಣೆ
ಪ್ರಧಾನಮಂತ್ರಿ ಅವರು ಶ್ರೀ ಕೃಷ್ಣ ದೇಗುಲದ ಗರ್ಭಗುಡಿಯ ಮುಂಭಾಗದಲ್ಲಿರುವ ʻಸುವರ್ಣ ತೀರ್ಥ ಮಂಟಪʼವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ, ಕನಕದಾಸರು ಭಗವಾನ್ ಶ್ರೀಕೃಷ್ಣನ ದಿವ್ಯ ದರ್ಶನವನ್ನು ಪಡೆದ ಸ್ಥಳವೆಂದು ಎಂದು ನಂಬಲಾದ ಪವಿತ್ರ ಕಿಟಕಿಯಾದ ʻಕನಕನ ಕಿಂಡಿʼಗೆ ಕನಕ ಕವಚವನ್ನು ಸಮರ್ಪಿಸಲಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠವನ್ನು 800 ವರ್ಷಗಳ ಹಿಂದೆ ವೇದಾಂತದ ದ್ವೈತ ತತ್ವಶಾಸ್ತ್ರದ ಸಂಸ್ಥಾಪಕರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ್ದರು.

 

 

error: Content is protected !!