ಮಂಗಳೂರು: ಸಿಟಿ ಪೊಲೀಸ್ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಪತ್ತೆಯಾಗಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್‌ಐ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿರುವಾಗ ಮಂಗಳೂರು ಸಿಟಿ ಪೊಲೀಸ್ ಎಂಬ ಹೆಸರಿನ ಫೇಸ್‌ಬುಕ್ ಖಾತೆ ಕಂಡು ಬಂದಿದ್ದು, ಅದರಲ್ಲಿ ಪೊಲೀಸ್ ಆಯುಕ್ತರ ಭಾವಚಿತ್ರ ಮತ್ತು ಸರಕಾರದ ಲಾಂಛನವನ್ನು ಬಳಸಲಾಗಿತ್ತು. ಖಾತೆಯ ಬಗ್ಗೆ ಸಂಶಯಗೊಂಡು ಆಯುಕ್ತರ ಕಚೇರಿಯಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂದು ದೃಢಪಟ್ಟಿದೆ.
