ಜಗತ್ತಿನಲ್ಲೇ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ

ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ನ.28) ಲೋಕಾರ್ಪಣೆ ಮಾಡಿದರು.

“ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್‌’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್‌ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು.

ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್‌ ಪಾರ್ಕ್‌, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಿದರು.

ದಾಖಲೆ ಸೃಷ್ಟಿಸಿದ ರಾಮನಾಮ ಜಪ: ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಶ್ರೀಮದ್‌ ವಿದ್ಯಾಧೀಶತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ.

error: Content is protected !!