ಗಾಂಜಾದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೋರ್ವ ಪೊಲೀಸರ ವಶ !

ಮಂಗಳೂರು: ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬಂದರು ಅನ್ಸಾರಿ ರೋಡ್ ನಿವಾಸಿ ಹನೀಫ್ (42) ಎಂಬಾತನನ್ನು ಬಂದರು ಠಾಣೆ ಪೊಲೀಸರು ವಧಕ್ಕೆ ಪಡೆದುಕೊಂಡಿದ್ದಾರೆ.

ಗಾಂಜಾದ ಅಮಲಿನಲ್ಲಿ ತೂರಾಡಿಕೊಂಡು ಹೋಗುತ್ತಿದ್ದ ಹನೀಫ್‌ ನನ್ನು ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

error: Content is protected !!