ಗುಜ್ಜರಕೆರೆಯಲ್ಲಿ ಶತಮಾನಂ ಭವತು ಸಂಗೀತ ಸಂಜೆ ಸಂಪನ್ನ

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ ನೂರು ವರ್ಷ ಹಾಗೂ ಜಗದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಅಂಗವಾಗಿ ಯೋಗ್ ಫೌಂಡೇಶನ್ ಆಶ್ರಯದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಗಾಯಕ ಬಾಲಚಂದ್ರ ಪ್ರಭು ಹಾಗೂ ತಂಡದವರಿಂದ ದೇಶ ಹಾಗೂ ಧರ್ಮ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು.

ಗುಜ್ಜರಕೆರೆಯನ್ನು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ವೇದಿಕೆಯ ಎರಡೂ ಭಾಗಗಳಲ್ಲಿ ಹಣತೆಯ ಮಾದರಿಯ ದೀಪಗಳನ್ನು ಉರಿಸಿ ಕಾರ್ಯಕ್ರಮದ ಅಂದವನ್ನು ಹೆಚ್ಚಿಸಲಾಗಿತ್ತು. ಇನ್ನು ಹಣತೆಗಳನ್ನು ಬೆಳಗಿಸಿ ಕೆರೆಯಲ್ಲಿ ತೇಲಿಬಿಡುವ ಮೂಲಕ ಜನರು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಸಂಸ್ಕೃತ ಭಾರತಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ದಿನೇಶ್ ಕಾಮತ್ ಅವರು ಸಂಘ 100 ವರ್ಷಗಳಲ್ಲಿ ನಡೆಸಿಕೊಂಡು ಬಂದ ಕಾರ್ಯಕ್ರಮಗಳು ಹಾಗೂ ರಾಷ್ಟ್ರಧರ್ಮ ಕಾರ್ಯದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಕೊಡುಗೆಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮವನ್ನು ಗೋಪಾಲಕೃಷ್ಣ ಭಟ್ ನಿರೂಪಿಸಿ ವಂದಿಸಿದರು. ಯೋಗ್ ಫೌಂಡೇಶನ್ ಪದಾಧಿಕಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಕಾಶೀಮಠದ ಭಕ್ತರು ಉಪಸ್ಥಿತರಿದ್ದರು.

error: Content is protected !!