ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಬುಧವಾರ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದೆ.

ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸೆಪ್ಟೆಂಬರ್‌ನಲ್ಲಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ.