ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರೇಣುಕಾಸ್ವಾಮಿ ತಂದೆ – ತಾಯಿಗೂ ಸಮನ್ಸ್ ಜಾರಿಗೊಳಿಸಿದ ಕೋರ್ಟ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ(ಡಿ.3) ದಂದು ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ನ್ಯಾಯಾಧೀಶರು ಮೃತ ದುರ್ದೈವಿ ರೇಣುಕಾಸ್ವಾಮಿಯವರ ತಂದೆ ಹಾಗೂ ತಾಯಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಡಿ. 17ರಿಂದ ಈ ಪ್ರಕರಣ ಸಾಕ್ಷಿಗಳ ವಿಚಾರಣೆ ಆರಂಭಿಸಲು ನಿರ್ಧರಿಸಲಾಗಿದೆ. ಆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರೇಣುಕಾಸ್ವಾಮಿಯವರ ತಂದೆ, ತಾಯಿ ಹಾಗೂ ರೇಣುಕಾಸ್ವಾಮಿಯ ಮೃತದೇಹವನ್ನು ಮೊದಲು ನೋಡಿದ್ದ ಬೆಂಗಳೂರಿನ ವಾಚ್ ಮ್ಯಾನ್ ಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಸಾಕ್ಷಿಗಳ ಪಟ್ಟಿಯಲ್ಲಿರುವಂತೆ ಸದ್ಯಕ್ಕೆ ಮೂವರು ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಇನ್ನೂ ಯಾರಿಗೆ ಸಮನ್ಸ್ ಜಾರಿಗೊಳಿಸಬೇಕು ಎಂಬುದನ್ನು ಡಿ. 4ರಂದು ತೀರ್ಮಾನಿಸಲಾಗುತ್ತದೆ ಎಂದು ಹೇಳಿ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 17ಕ್ಕೆ ಮುಂದೂಡಿದರು.

error: Content is protected !!