IMD ಮುನ್ಸೂಚನೆ: ಕರಾವಳಿಯಲ್ಲಿ ಮುಂದಿನ 24 ಗಂಟೆ ಮಳೆಯ ಸಾಧ್ಯತೆ; ಮೀನುಗಾರರಿಗೆ ನಿಷೇಧ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮುಂದಿನ 24 ಗಂಟೆಗಳಲ್ಲಿಯೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಗುಡುಗು-ಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಕಾಫಿ, ಏಲಕ್ಕಿ ತೋಟಗಳು ತೇವಾಂಶದಿಂದ ತುಂಬಿ ಹಸಿರಾಗಿವೆ. ಆದರೆ ಅತಿಯಾದ ಮಳೆಯಿಂದ ಭೂಕುಸಿತದ ಅಪಾಯವೂ ಇದ್ದು, ಸ್ಥಳೀಯರು ಎಚ್ಚರ ವಹಿಸಹಿಸಬೇಕಿದೆ.

ಹವಾಮಾನ ಇಲಾಖೆಯು ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರಿಕೆ ವಹಿಸಿ, ಕಡಿಮೆ ಎತ್ತರದ ಪ್ರದೇಶಗಳಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

error: Content is protected !!