ಗುಂಟೂರು: ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿಲಕುಟ್‌ಪೇಟದಲ್ಲಿ ನಡೆದಿದೆ.

ಮೃತರು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಐವರು ಅಯ್ಯಪ್ಪ ಮಾಲಾಧಾರಿಗಳು ಗುಂಟೂರಿನಿಂದ ಪೆನುಕೊಂಡಕ್ಕೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
