2 ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ

ಚಿಕ್ಕಮಗಳೂರು : 2 ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ(ಡಿ.5) ರಾತ್ರಿ ನಡೆದಿದೆ.

ಕಾಂಗ್ರೆಸ್ ಗ್ರಾಪಂ ಸದಸ್ಯನ ಗಣೇಶ್ (38) ಹತ್ಯೆಗೀಡಾದ ವ್ಯಕ್ತಿ.

ಕಲ್ಮುರುಡೇಶ್ಚರ ಮಠದ ಬಳಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ 2 ಗುಂಪುಗಳ ಮಧ್ಯೆ ರಾತ್ರಿ 10.30ರ ವೇಳೆಗೆ ಗಲಾಟೆ ನಡೆದಿದ್ದು, ಎದುರಾಳಿ ಗುಂಪಿನ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ಯೆ ನಡೆಸಿದ ಗುಂಪಿನ ಆರೋಪಿಗಳು ಹಿಂದೂ ಪರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

error: Content is protected !!