
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಮತ್ತು ಕ್ಲಬ್ನ 19 ಸಿಬ್ಬಂದಿ ಸೇರಿದ್ದಾರೆಂದು ಹೇಳಲಾಗುತ್ತಿದೆ. ತಡರಾತ್ರಿ ಘಟನೆ ಸಂಭವಿಸಿದ್ದು, ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಇನ್ನೂ ಯಾವುದೇ ದೃಢೀಕರಣಗಳು ಲಭ್ಯವಾಗಿಲ್ಲ. ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಬೆಂಕಿಯ ಜ್ವಾಲೆಗಳು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತ್ತು.
