BREAKING NEWS!! ಸುರತ್ಕಲ್: ಚಾಕಲೇಟ್ ಖರೀದಿಸಲು ಅಂಗಡಿಗೆ ಹೋದ ಬಾಲಕನ ಕೈಕಾಲು ಕಟ್ಟಿ ಲೈಂಗಿಕ ದೌರ್ಜನ್ಯ! ಅಂಗಡಿ ಮಾಲಕ ಬಂಧನ!!

ಸುರತ್ಕಲ್: ಚಾಕಲೇಟ್ ಖರೀದಿ ಮಾಡಲು ಅಂಗಡಿಗೆ ಹೋಗಿದ್ದ ಅಪ್ರಾಪ್ತ ಬಾಲಕನ ಕೈಕಾಲು ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಅಂಗಡಿ ಮಾಲಕನ ವಿರುದ್ಧ ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಜಕೀಯ ಪಕ್ಷವೊಂದರ ಸ್ಥಳೀಯ ಮುಖಂಡನಾಗಿದ್ದಾನೆ ಎನ್ನಲಾಗಿದೆ.
ಘಟನೆಯ ವಿವರ:
ಚೊಕ್ಕಬೆಟ್ಟು ನಿವಾಸಿ 6ನೇ ತರಗತಿಯಲ್ಲಿ ಕಲಿಯುತ್ತಿರುವ 11ನೇ ವರ್ಷದ ಬಾಲಕ ಆರೋಪಿ ಇಸ್ಮಾಯಿಲ್ ಗೆ ಸೇರಿದ ಚೊಕ್ಕಬೆಟ್ಟು ಜುಮ್ಮಾ ಮಸೀದಿ ಬಳಿ ಇರುವ ಹನಿ ಫ್ಯಾಷನ್ ಶಾಪ್ ಗೆ ಚಾಕೊಲೇಟ್ ಖರೀದಿಸಲು ಹೋದಾಗ ಆರೋಪಿಯು ಬಾಲಕನನ್ನು ಅಂಗಡಿಯಲ್ಲಿರುವ ರೂಂ ಒಂದರಲ್ಲಿ ಕೂಡಿ ಹಾಕಿ ಬಾಲಕನ ಕೈ-ಕಾಲನ್ನು ಹಗ್ಗದಿಂದ ಕಟ್ಟಿ ಬಾಯಿಯಲ್ಲಿ ಬಟ್ಟೆಯನ್ನು ತುರುಕಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ನೊಂದ ಬಾಲಕನ ತಾಯಿ ನೀಡಿದ ದೂರಿನಂತೆ ಠಾಣಾ ಅಕ್ರ 160/2025 ಕಲಂ 4, 6 ಪೋಕ್ಸೋ ಕಾಯ್ದೆ & ಕಲಂ 351(2), 127(2) ಬಿ.ಎನ್.ಎಸ್ ರಂತೆ ಪ್ರಕರಣವನ್ನು ದಾಖಲಿಸಿಕೊಂಡು ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ರವರ ತಂಡ ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

error: Content is protected !!