ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ!

ಕಾಪು: ಕಾಪುವಿನಿಂದ ಉಚ್ಚಿಲ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನ ವಿದ್ಯಾನಿಕೇತನ್ ಶಾಲೆ ಎದುರು ಭಾನುವಾರ(ಡಿ.7) ಬೆಳಿಗ್ಗೆ ನಡೆದಿದೆ.

ಕೊಪ್ಪಲಂಗಡಿಯ ನಿವಾಸಿ ಇಸ್ಮಾಯಿಲ್ ಗಾಯಗೊಂಡಿರುವ ಚಾಲಕ.

ಎಸ್‌ಡಿಪಿಐ ಆ್ಯಂಬುಲೆನ್ಸ್ ಸಿಬ್ಬಂದಿಗಳಾದ ಜಲಾಲುದ್ದೀನ್ ಉಚ್ಚಿಲ ಮತ್ತು ಹಮೀದ್ ಅವರು ಗಂಭೀರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!