ಚಿಕ್ಕಮಗಳೂರು: ಹೇರೂರು ಕಾಫಿ ಎಸ್ಟೇಟ್‌ನಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿರುವ ಘಟನೆ ಕೊಪ್ಪ ತಾಲೂಕಿನ ಜಯಪುರದಲ್ಲಿ ಬೆಳಕಿಗೆ ಬಂದಿದೆ.

ಅಸ್ಸಾಂನಿಂದ ಬಂದಿದ್ದ ಕೂಲಿ ಕಾರ್ಮಿಕರು ಎರಡು ದನಗಳನ್ನು ಕದ್ದು ಕಾಫಿ ತೋಟದಲ್ಲಿ ಹತ್ಯೆ ಮಾಡಿ ಮಾಂಸ ಹಂಚಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಅನ್ಸರ್, ಮಜೀದ್, ಮತ್ತು ಮುಜಾಮಿಲ್ ಬಂಧಿತ ಆರೋಪಿಗಳು.
ಸ್ಥಳೀಯರು ಬಂಧಿತ ಆರೋಪಿಗಳನ್ನು ಅಸ್ಸಾಂನವರಲ್ಲ, ಅಕ್ರಮ ಬಾಂಗ್ಲಾ ವಲಸಿಗರೆಂದು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.