ಬಂಟ್ವಾಳ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಕ್ಲಿಪರ್ಡ್ ಡಿ’ಸೋಜಾ ಗಾಯಗೊಂಡ ಘಟನೆ ಬಿ.ಸಿ.ರೋಡು ಅಜ್ಜಿಬೆಟ್ಟು ಕ್ರಾಸ್ ಬಳಿ ಸಂಭವಿಸಿದೆ.

ಕ್ಲಿಪರ್ಡ್ ಅವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.