ಮಂಗಳೂರು: ಪಡುಬಿದ್ರಿ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಉದ್ಯಮಿ ಅಭಿಷೇಕ್(ಅಭಿ)(32) ಸಾವನ್ನಪ್ಪಿದ್ದಾರೆ.

ಡಿಸೆಂಬರ್ 10ರ ರಾತ್ರಿ ಸುಮಾರು 2.20ರ ಸುಮಾರಿಗೆ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ನೀಡಿದ ತುರ್ತು ಚಿಕಿತ್ಸೆಯೂ ಫಲಿಸದ ಕಾರಣ ಅವರು ಕೊನೆಗೆ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪಂಪ್‌ವೆಲ್ ಗೌಜಿ ಈವೆಂಟ್ ಮಾಲಕರಾಗಿದ್ದ ಇವರು ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಅಭಿಷೇಕ್ ಅವರ ಅಕಾಲಿಕ ನಿಧನದಿಂದ ಕುಟುಂಬಿಕರು ಹಾಗೂ ಸ್ನೇಹಿತರು ಆಘಾತಕ್ಕೀಡಾಗಿದ್ದು, ಶೋಕ ಆವರಿಸಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
