ಭೀಕರ ಬಸ್ ಅಪಘಾತ: 9 ಜನರ ಸಾವು, 22 ಜನರಿಗೆ ಗಾಯ

ಚಿಂತೂರು: ಬೆಟ್ಟದ ಪ್ರದೇಶದ ರಸ್ತೆಯಿಂದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿರುವ ಘಟನೆ ಇಂದು(ಡಿ.12) ಬೆಳಗ್ಗೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ತೂರಿನಿಂದ ನೆರೆಯ ತೆಲಂಗಾಣಕ್ಕೆ ಹೋಗುತ್ತಿದ್ದ ಬಸ್‌ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಇದ್ದರು, ಅವರಲ್ಲಿ ಆರು ಮಂದಿ ಸುರಕ್ಷಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಬಳಿ ಬೆಳಗಿನ ಜಾವ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.

error: Content is protected !!