ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿ ಮಿಶನ್ ಕಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್ ಸಿಯಾನ್ (31) ಎಂದು ಗುರುತಿಸಲಾಗಿದೆ.

ಪೊಲೀಸರು ಡಿಸೆಂಬರ್ 15ರಂದು ಬೆಳಿಗ್ಗೆ 10.30ರ ಸುಮಾರಿಗೆ ಎಂಜಿಎಂ ಕಾಲೇಜಿನ ಬಸ್‌ಸ್ಟ್ಯಾಂಡ್ ಸಮೀಪ ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಬಳಿಯಿಂದ ಕೃತ್ಯಕ್ಕೆ ಉಪಯೋಗಿಸಿದ KA20 MF 207 ನೋಂದಣಿ ಸಂಖ್ಯೆಯ ಗ್ಲಾಂಜಾ ಕಾರು ಹಾಗೂ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
“ರಿಧಾ ನಿನಗಾಗಿ ಕಾಯುತ್ತಿದ್ದಾಳೆ…!” ಹೆಂಡತಿಯ ಮೂಲಕ ಬಲೆಗೆ ಬೀಳಿಸಿ ಎಕೆಎಂಎಸ್ ಮಾಲಕನ ಕೊಲೆ!