ಕೆಎಸ್‌ಆರ್‌ಟಿಸಿ ಖಾಸಗಿ ಬಸ್ ಡಿಕ್ಕಿ: ಏಳು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತದ ಸಮಯದಲ್ಲಿ ಅಯ್ಯಪ್ಪ ಭಕ್ತರು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಡಿಕ್ಕಿ ಹೊಡೆದ ನಂತರ, ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!