ಬಾವಿಯಿಂದ ನೀರು ಸೇದುವ ವೇಳೆ ಬಾವಿಗೆ ಬಿದ್ದು ಮಗು ಸಾವು

ಉಡುಪಿ: ತಾಯಿ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.

ಮಗುವಿನ ತಾಯಿ ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದರು. ಈ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ಈ ವೇಳೆ ತಾಯಿ ತಕ್ಷಣವೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ರಕ್ಷಿಸಲು ಯತ್ನಿಸಿದರೂ, ಅಷ್ಟರಲ್ಲೇ ಮಗು ಮೃತಪಟ್ಟಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಭರತೇಶ್ ಕಂಕಣವಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ದುಃಖ ಮತ್ತು ಆಘಾತ ಮೂಡಿಸಿದ್ದು, ಒಂದು ಕ್ಷಣದ ಅಜಾಗರೂಕತೆ ಅಮೂಲ್ಯ ಜೀವವನ್ನೇ ಕಿತ್ತುಕೊಂಡಿದೆ

error: Content is protected !!